ಇಂಡಿಯನ್ ಬ್ಯಾಂಕ್ ನೇಮಕಾತಿ | Indian Bank Recruitment 2026
ಪ್ರತಿಷ್ಠಿತ ಇಂಡಿಯನ್ ಬ್ಯಾಂಕ್ (Indian Bank) ಅಖಿಲ ಭಾರತ ಮಟ್ಟದಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ (ಮ್ಯಾನೇಜರ್) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.
ಒಟ್ಟು 350 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ಸಂಬಳದ ಜೊತೆಗೆ ಬ್ಯಾಂಕಿಂಗ್ ಕ್ಷೇತ್ರದ ಸವಲತ್ತುಗಳು ಸಿಗಲಿವೆ. ಈ ನೇಮಕಾತಿಯ ಕುರಿತಾದ ಸಂಪೂರ್ಣ ವಿವರ ಇಲ್ಲಿದೆ ನೋಡಿ.
ಹುದ್ದೆಗಳ ವಿವರಗಳು:
- ಸಂಸ್ಥೆಯ ಹೆಸರು: ಇಂಡಿಯನ್ ಬ್ಯಾಂಕ್
- ಹುದ್ದೆಯ ಹೆಸರು: ಸ್ಪೆಷಲಿಸ್ಟ್ ಆಫೀಸರ್ (ಮ್ಯಾನೇಜರ್)
- ಒಟ್ಟು ಹುದ್ದೆಗಳು: 350
- ಉದ್ಯೋಗ ಸ್ಥಳ: ಭಾರತದಾದ್ಯಂತ
ಶೈಕ್ಷಣಿಕ ಅರ್ಹತೆ:
- ಪದವಿ ಅಥವಾ ಸ್ನಾತಕೋತ್ತರ ಪದವಿ
- BE/ B.Tech, M.Sc, MCA
- CA/ CFA/ ICAI/ ICMA
- MBA/ MMS/ MS
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 23 ವರ್ಷ ಮತ್ತು ಗರಿಷ್ಠ 45 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
- OBC ಅಭ್ಯರ್ಥಿಗಳಿಗೆ: 3 ವರ್ಷಗಳು
- SC/ST ಅಭ್ಯರ್ಥಿಗಳಿಗೆ: 5 ವರ್ಷಗಳು
- PWBD ಅಭ್ಯರ್ಥಿಗಳಿಗೆ: 10 ವರ್ಷಗಳು
ಸಂಬಳ:
ತಿಂಗಳಿಗೆ ₹85,920 ರಿಂದ ₹1,05,280/- ವರೆಗೆ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
- SC/ ST/ PWBD ಅಭ್ಯರ್ಥಿಗಳಿಗೆ: ₹175/-
- ಇತರ ಎಲ್ಲಾ ಅಭ್ಯರ್ಥಿಗಳಿಗೆ: ₹1000/-
- ಪಾವತಿ ವಿಧಾನ: ಆನ್‌ಲೈನ್ ಮೂಲಕ
ಆಯ್ಕೆ ಪ್ರಕ್ರಿಯೆ ಹೇಗೆ?
- ಲಿಖಿತ ಅಥವಾ ಆನ್‌ಲೈನ್ ಪರೀಕ್ಷೆ
- ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಇಂಡಿಯನ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ indianbank.bank.in ಗೆ ಭೇಟಿ ನೀಡಿ.
- ‘Careers’ ವಿಭಾಗದಲ್ಲಿ ಸ್ಪೆಷಲಿಸ್ಟ್ ಆಫೀಸರ್ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ ನಿಮ್ಮ ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
- ನಿಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
- ನಿಗದಿತ ಅರ್ಜಿ ಶುಲ್ಕ ಪಾವತಿಸಿ, ಅರ್ಜಿಯನ್ನು ಸಬ್ಮಿಟ್ ಮಾಡಿ ಮತ್ತು ಪ್ರಿಂಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 08-04-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-04-2026


No comments:
Post a Comment